ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಕಾರ್ಯ ನಿರ್ವಹಣಾ ತಂಡದ ತಿಂಗಳ ಅವಲೋಕನ ಸಭೆ

ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಕಾರ್ಯ ನಿರ್ವಹಣಾ ತಂಡದ ತಿಂಗಳ ಅವಲೋಕನ ಸಭೆ


ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ ಡೊಂಗರಕೇರಿ ಭುವನೇಂದ್ರ ಸಭಾ ಭವನದಲ್ಲಿ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ಅದ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಗಣೇಶ್ ಕಾರ್ಣಿಕ್ ಅವರು, ಬಿಜೆಪಿ ಹಿಂದುತ್ವ ಹಾಗೂ ಪರಮ ವೈಭವದ ಸ್ಥಿತಿಗೆ ದೇಶವನ್ನು ಕರೆದೊಯ್ಯುವ ಸಿದ್ಧಾಂತದಿಂದ ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎಂಟು ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ದೇಶವು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಅರೋಗ್ಯ ಹಾಗೂ ಇನ್ನಿತರ ಎಲ್ಲ ಕ್ಷೇತ್ರಗಳಲ್ಲಿ ಸರ್ವಾಂಗೀಣ ಅಭಿವೃದ್ಧಿ ಕಂಡಿದೆ ಎಂದು ನುಡಿದರು.


ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿ ಶ್ರೀಮತಿ ಕಸ್ತೂರಿ ಪಂಜ ಅವರು ಪಕ್ಷದ ಸಂಘಟನಾತ್ಮಕ ವಿಷಯಗಳ ಬಗ್ಗೆ ಮಾತನಾಡಿ ಪಕ್ಷದ ಮುಂದಿನ ಕಾರ್ಯ ಯೋಜನೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.


ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೂಪ ಡಿ ಬಂಗೇರ ಅವರು ವಿವಿಧ ಮೋರ್ಚಾಗಳು ಮಂಡಿಸಿದ ವರದಿಗಳನ್ನು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಜನ ಸಂಘದ ಪ್ರಥಮ ಜಿಲ್ಲಾ ಅಧ್ಯಕ್ಷರಾದ ಎಂ. ಡಿ. ಕಾಮತ್ ಹಾಗೂ ಬಿಜೆಪಿ ಕಾರ್ಯಕರ್ತರಾದ ಪುರುಷೋತ್ತಮ ಸುವರ್ಣ ಅವರಿಗೆ ನುಡಿ ನಮನ ಸಲ್ಲಿಸಲಾಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಮಂಡಲ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರು ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದು, ಮುಂದೆ ಪಕ್ಷವು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಿದ್ದು. ಈ ಕಾರ್ಯಕ್ರಮಗಳನ್ನು ತಳ ಮಟ್ಟದಲ್ಲಿ ಮುಟ್ಟಿಸುವಲ್ಲಿ ಶಕ್ತಿ ಕೇಂದ್ರ ಪ್ರಮುಖರು ಮತ್ತು ಬೂತ್ ಅಧ್ಯಕ್ಷರು ಮುಖ್ಯ ಪಾತ್ರ ವಹಿಸಬೇಕೆಂದು ಕರೆ ನೀಡಿದರು.


ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೆ ಅವರು ಸ್ವಾಗತಿಸಿದರು, ಮಂಡಲ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಚಿಲಿಂಬಿ ಧನ್ಯವಾದ ಸಮರ್ಪಿಸಿದರು. ಮಂಡಲ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ರಘುವೀರ್ ಬಾಬುಗುಡ್ಡೆ ಕಾರ್ಯಕ್ರಮ ನಿರೂಪಣೆ ಮಾಡಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ  ಮೋನಪ್ಪ ಭಂಡಾರಿ, ಮಾಜಿ ಉಸ್ತುವಾರಿ ಸಚಿವರಾದ ನಾಗರಾಜ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರ್, ಜಿಲ್ಲಾ ಉಪಾಧ್ಯಕ್ಷರು ಹಾಗೂ ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್, ಮ ನ ಪಾ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮೂಡ ಅಧ್ಯಕ್ಷರಾದ ರವಿಶಂಕರ್ ಮೀಜಾರ್, ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು, ದೀಪಕ್ ಪೈ, ಕಿರಣ್ ರೈ, ರಮೇಶ್ ಹೆಗ್ಡೆ, ಅಜಯ ಕುಲಶೇಕರ್ ಮಂಡಲದ ಪದಾಧಿಕಾರಿಗಳು, ಮಂಡಲದ ಜಿಲ್ಲಾ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠದ ಸಂಚಾಲಕರು ಹಾಗೂ ಸಹ ಸಂಚಾಲಕರು, ಶಕ್ತಿ ಕೇಂದ್ರದ ಪ್ರಮುಖರು ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

0 Comments

Post a Comment

Post a Comment (0)

Previous Post Next Post