ಮಂಗಳೂರು: ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಸೋನಾಲಿಕೆಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಸೊನಾಲಿಕೆ ಮುಖ್ಯರಸ್ತೆಯ ಕವಲೊಡೆದ ಅಡ್ಡರಸ್ತೆಯಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡರ ಬೇಡಿಕೆಯಂತೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಈಗಾಗಲೇ ಬಜಾಲ್ ವಾರ್ಡಿನಲ್ಲಿ ಅನೇಕ ಕಾಮಗಾರಿಗಳು ಪ್ರಗತಿಯ ಹಂತದಲ್ಲಿದ್ದು ಮುಂಬರುವ ದಿನಗಳಲ್ಲಿ ವಾರ್ಡಿನ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್ ಅಶ್ರಫ್, ಬಿಜೆಪಿ ಮುಖಂಡರಾದ ಕಿರಣ್ ರೈ ಎಕ್ಕೂರು, ಚಂದ್ರಶೇಖರ ಜಯನಗರ, ಯಶವಂತ್ ಶೆಟ್ಟಿ, ನವೀನ್ ಪೂಜಾರಿ, ರಾಜೇಶ್ ಶೆಟ್ಟಿ, ವನಿತಾ ಸೊನಾಲಿಕೆ, ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment