ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೈಕ್ ಡಿಕ್ಕಿ ; ಬಿ.ಕಾಂ ವಿದ್ಯಾರ್ಥಿನಿ ಸಾವು

ಬೈಕ್ ಡಿಕ್ಕಿ ; ಬಿ.ಕಾಂ ವಿದ್ಯಾರ್ಥಿನಿ ಸಾವು

 


ಕುಣಿಗಲ್: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಿ.ಕಾಂ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆಯೊಂದು ತಾಲೂಕಿನ ಹುತ್ರಿದುರ್ಗ ಹೋಬಳಿ ಯಲಿಯೂರು ಗ್ರಾಮದಲ್ಲಿ ನಡೆದಿದೆ. ಯಲಿಯೂರು ಗ್ರಾಮದ 19 ವರ್ಷದ ವೈ.ಆರ್. ಚಿನ್ಮಯಿ ಮೃತ ಯುವತಿ.

ಚಿನ್ಮಯಿ ಮನೆಯ ಮುಂಭಾಗದಲ್ಲಿ ನಡೆದುಕೊಂಡು ಹೊಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಅಂಚೇಪಾಳ್ಯ ಕಾರ್ಖಾನೆ ಕಡೆಯಿಂದ ವೇಗವಾಗಿ ಬಂದ ಬೈಕ್ ಯುವತಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.


0 تعليقات

إرسال تعليق

Post a Comment (0)

أحدث أقدم