ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ


ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಮತ್ತು ಕೆ.ಎಂ.ಸಿ‌ ಆಸ್ಪತ್ರೆಯ ಸಹಕಾರದಲ್ಲಿ ರಕ್ತದಾನ ಶಿಬಿರ ಶನಿವಾರ ನಡೆಯಿತು.


ಡೊಂಗರಕೇರಿ ಕೆನರಾ ಪ್ರೌಢಶಾಲೆಯ ಭುವನೇಂದ್ರ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 115 ನಾಗರಿಕರು ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸುವ ಸಂಕಲ್ಪ ತೊಟ್ಟರು.


130 ವರ್ಷಗಳ ಹಿನ್ನಲೆ ಇರುವ, ನಾಡಿನ ಸುಪ್ರಸಿದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಮುಖವಾಗಿರುವ ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸಿಬಿಎಸ್ ಸಿ ಯಿಂದ ಪ್ರೌಢಶಾಲೆ, ಕಾಲೇಜುಗಳನ್ನು ಒಳಗೊಂಡು ಇಂಜಿನಿಯರಿಂಗ್ ಶಿಕ್ಷಣ ವ್ಯವಸ್ಥೆಯೂ ಇದ್ದು, ನುರಿತ ಶಿಕ್ಷಕ ವರ್ಗವನ್ನು ಹೊಂದಿದೆ. ಪರಿಣಿತ ಆಡಳಿತ ಮಂಡಳಿ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವಿದ್ಯಾರ್ಥಿ ವೃಂದದ ಏಳಿಗೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಇದು ಮಕ್ಕಳ ಉಜ್ವಲ ಭವಿಷ್ಯಕ್ಕೆ ಭದ್ರ ತಳಪಾಯವನ್ನು ಹೊಂದಲಿದೆ.


ಉದ್ಘಾಟನಾ ಸಮಾರಂಭದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಹನುಮಂತ ಕಾಮತ್, ನರಸಿಂಹ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ, ಕೆಎಂಸಿ ಆಸ್ಪತ್ರೆಯ ಡಾ. ಶ್ರೀರಾಮ್, ಆದರ್ಶ ಶೆಟ್ಟಿ ಎಕ್ಕಾರು, ಸೂರಜ್ ಬಜಿಲಕೇರಿ, ಎಂಎಂಪಿಯ ತುಕಾರಾಮ್ ಪ್ರಭು, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ರಿಜಿಸ್ಟ್ರಾರ್ ಗುರುದತ್ ಭಾಗವತ್, ಚಂದ್ರಕಾಂತ್ ಕಾಮತ್, ನರೇಶ್ ಪ್ರಭು, ಚೇತನ್ ಕಾಮತ್ ಹಾಗೂ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಪ್ರಮುಖರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم