ಮಂಗಳೂರು: ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಫೈಸಲ್ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಬಜಾಲ್ ವಾರ್ಡಿನ ಸರ್ವಾಂಗೀಣ ಅಭಿವೃದ್ಧಿಗೆ ವಿವಿಧ ಇಲಾಖೆಗಳಿಂದ ಅನುದಾನ ಒದಗಿಸಲಾಗಿದೆ. ರಸ್ತೆ, ಮೂಲಭೂತ ಸೌಕರ್ಯಗಳು ಹಾಗೂ ಅಳಿವಿನಂಚಿನಲ್ಲಿರುವ ಕೆರೆಗಳ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಅನುದಾನ ಬಿಡುಗಡೆಗೊಳಿಸಲಾಗಿದೆ. ಫೈಸಲ್ ನಗರದಲ್ಲಿ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಮುಖಂಡರು ನೀಡಿದ ಮನವಿಯಂತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಬಿಜೆಪಿ ಮುಖಂಡರಾದ ಕಿರಣ್ ರೈ ಎಕ್ಕೂರು, ಚಂದ್ರಶೇಖರ್, ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment