ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ. ಯಶೋವರ್ಮ ನಿಧನ ಹಿನ್ನೆಲೆ ಧರ್ಮಸ್ಥಳದಲ್ಲಿ ಶ್ರದ್ಧಾಂಜಲಿ ಸಭೆ

ಡಾ. ಯಶೋವರ್ಮ ನಿಧನ ಹಿನ್ನೆಲೆ ಧರ್ಮಸ್ಥಳದಲ್ಲಿ ಶ್ರದ್ಧಾಂಜಲಿ ಸಭೆ


ಧರ್ಮಸ್ಥಳ: ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮರ ನಿಧನದ ಬಗ್ಯೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಮಂಗಳವಾರ ಮೌನ ಪ್ರಾರ್ಥನೆ, ಪುಷ್ಪಾರ್ಚನೆ ಬಳಿಕ ನುಡಿನಮನ ಸಲ್ಲಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಲಾಯಿತು.


ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು.


ಶಾಂತಿವನ ಟ್ರಸ್ಟ್‍ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಮತ್ತು ತೋಟಗಾರಿಕಾ ವಿಭಾಗದ ಮುಖ್ಯಸ್ಥರಾದ ಬಿ. ಬಾಲಕೃಷ್ಣ ಪೂಜಾರಿ ಮಾತನಾಡಿ, ಬಿ. ಯಶೋವರ್ಮರ ಸರಳ ವ್ಯಕ್ತಿತ್ವ, ದಕ್ಷ ಆಡಳಿತ ಕ್ರಮದ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.


ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಪ್ರಧಾನ ಅರ್ಚಕರಾದ ಈಶ್ವರ ಪರ್ಲತ್ತಾಯ, ಅನ್ನಪೂರ್ಣ ಛತ್ರದ ಸುಬ್ರಹ್ಮಣ್ಯ ಪ್ರಸಾದ್, ಶುಭಚಂದ್ರರಾಜ ಮತ್ತು ಎಲ್ಲಾ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم