ಮಂಗಳೂರು: ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷ ಅವರು ಸೇವೆ ಸಲ್ಲಿಸಿದ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ಅವರ ನಿಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಂತಾಪ ಸೂಚಿಸಿದ್ದಾರೆ.
ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಮಾನವೀಯ ಮೌಲ್ಯಗಳನ್ನು ತುಂಬಿದ ಅವರ ಬದುಕು ಆದರ್ಶಪ್ರಾಯ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಹೇಳಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment