ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರದ ಎಪಿಎಂಸಿ ರಸ್ತೆಯ ಹೋಂಡಾ ಶೋರೂಮ್ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ.
ವಾಹನದಲ್ಲಿದ್ದ ಸಿಲಿಂಡರ್ ರನ್ನು ಬದಲಾವಣೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡಿದೆ.
ಇದರಿಂದಾಗಿ ಅಕ್ಕಪಕ್ಕದ ವಾಹನಗಳಿಗೂ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಗೋಕಾಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق