ಮಂಗಳೂರು: ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಗಳ ವಸತಿ ಸಂಕೀರ್ಣ ನಗರದ ಪಡೀಲ್ ನ ಅರಣ್ಯ ಸಸ್ಯಪಾಲನಾಲಯ ನೂತನವಾಗಿ ನಿರ್ಮಾಣ ಮಾಡಲಾಗುತ್ತಿದೆ. ಇದರ ಶಿಲಾನ್ಯಾಸವನ್ನು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಮೇ 23 ರಂದು ಬೆಳಿಗ್ಗೆ 9 ಗಂಟೆಗೆ ನೆರವೇರಿಸಲಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಅಳಪೆ ವಾರ್ಡ್ ಪಾಲಿಕೆ ಸದಸ್ಯೆ ಶೋಭಾ ಪೂಜಾರಿ ಮುಖ್ಯ ಆತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕುಮಾರ್ ಶ್ರೀವಾಸ್ತವ, ಮಂಗಳೂರು ವೃತ್ತ ಅರಣ್ಯ ಭವನ ನೋಡಲ್ ಅಧಿಕಾರಿ ಸ್ಮಿತಾ ಬಿಜ್ಜುರ್, ಮಂಗಳೂರು ವಲಯ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರಕಾಶ್ ಎಸ್ ನೆಟಲ್ಕರ್, ಮಂಗಳೂರು ವಲಯ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ದಿನೇಶ್, ಸಹಾಯಕ ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ರಾವ್ ಗೌರವ ಉಪಸ್ಥಿತರಿಲಿದ್ದಾರೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಕುಮಾರ್ ಪೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق