ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅತಿಥಿ ಉಪನ್ಯಾಸಕರ ಮೇ ತಿಂಗಳ ವೇತನ ಬಿಡುಗಡೆ

ಅತಿಥಿ ಉಪನ್ಯಾಸಕರ ಮೇ ತಿಂಗಳ ವೇತನ ಬಿಡುಗಡೆ

 


ಬೆಂಗಳೂರು :  ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ 24.67 ಕೋಟಿ ರೂ. ಬಿಡುಗಡೆ ಮಾಡಿದೆ.

2021-22 ನೇ ಸಾಲಿನ ವಿವಿಧ ವಿಷಯಗಳಿಗೆ ಈ ಅನುದಾನವನ್ನು ಸರ್ಕಾರದ ಆದೇಶಗಳನ್ವಯ ಅತಿಥಿ ಉಪನ್ಯಾಸಕರಾಗಿ ನೇಮಕವಾಗಿ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯಿಂದ ಅನುಮೋದನೆಗೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾತ್ರ ಪಾವತಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಮೇ ತಿಂಗಳ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದಿನ ಶಾಲೆಗಳಲ್ಲಿ ಬಳಕೆ ಮಾಡಿದರೆ ಗೌರವಧನವನ್ನು ಪಾವತಿಸದ್ದಲ್ಲಿ ಪ್ರಾಂಶುಪಾಲರನ್ನೇ ನೇರ ಹೊಣೆಗಾರರಾಗಿ ಮಾಡಲಾಗುತ್ತದೆ.


0 Comments

Post a Comment

Post a Comment (0)

Previous Post Next Post