ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ 24.67 ಕೋಟಿ ರೂ. ಬಿಡುಗಡೆ ಮಾಡಿದೆ.
2021-22 ನೇ ಸಾಲಿನ ವಿವಿಧ ವಿಷಯಗಳಿಗೆ ಈ ಅನುದಾನವನ್ನು ಸರ್ಕಾರದ ಆದೇಶಗಳನ್ವಯ ಅತಿಥಿ ಉಪನ್ಯಾಸಕರಾಗಿ ನೇಮಕವಾಗಿ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯಿಂದ ಅನುಮೋದನೆಗೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾತ್ರ ಪಾವತಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ಮೇ ತಿಂಗಳ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದಿನ ಶಾಲೆಗಳಲ್ಲಿ ಬಳಕೆ ಮಾಡಿದರೆ ಗೌರವಧನವನ್ನು ಪಾವತಿಸದ್ದಲ್ಲಿ ಪ್ರಾಂಶುಪಾಲರನ್ನೇ ನೇರ ಹೊಣೆಗಾರರಾಗಿ ಮಾಡಲಾಗುತ್ತದೆ.
إرسال تعليق