ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜಲ್ಲಿಗುಡ್ಡೆ: 1 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಚಾಲನೆ

ಜಲ್ಲಿಗುಡ್ಡೆ: 1 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಚಾಲನೆ


ಮಂಗಳೂರು: ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 


ಈ ವೇಳೆ ಮಾತನಾಡಿದ ಅವರು, ಜಲ್ಲಿಗುಡ್ಡೆ ಸಾಯಿ ಜನರಲ್ ಸ್ಟೋರ್ ಬಳಿಯಿಂದ ಮೈರಗುತ್ತು ವರೆಗಿನ ರಸ್ತೆ ಅಭಿವೃದ್ಧಿಪಡಿಸಲು ಸ್ಥಳೀಯ ನಾಗರಿಕರು ಮನವಿ ಸಲ್ಲಿಸಿದಂತೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದೇವೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದ್ದು ಸಾರ್ವಜನಿಕರ ಸಹಕಾರದಿಂದ ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು. 


ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್ ಅಶ್ರಫ್, ಬಿಜೆಪಿ ಮುಖಂಡರಾದ ಕಿರಣ್ ರೈ ಎಕ್ಕೂರು, ಚಂದ್ರಶೇಖರ, ರಾಜೇಶ್ ಶೆಟ್ಟಿ, ಗಣೇಶ್, ಸೀತಾರಾಮ ಪೂಜಾರಿ, ಯಶವಂತ್ ಶೆಟ್ಟಿ, ನವೀನ್ ಮೈರಗುತ್ತು, ಸಲೀಂ ಬೆಂಗ್ರೆ, ರಾಜೇಶ್, ಗಣೇಶ್ ಪೂಜಾರಿ, ಶಕುಂತಲ, ಸ್ಮಿತಾ, ಪಾಲಿಕೆಯ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

0 Comments

Post a Comment

Post a Comment (0)

Previous Post Next Post