ಬಂಟ್ವಾಳ : ಆಟವಾಡುತ್ತಿದ್ದ ವೇಳೆ ಮೂರನೇ ಮಹಡಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆಯೊಂದು ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕ ಗೋಳ್ತಮಜಲು ನಿವಾಸಿ ಅಹ್ಮದ್ ಎಂಬವರ ಪುತ್ರ ಮುಹಮ್ಮದ್ ಸಾಹಿಲ್ (10) ಮೃತಪಟ್ಟ ಬಾಲಕ.
ಗೋಲ್ತಮಜಲು ಸಿಟಿ ಪ್ಲಾಝಾ ಫ್ಲ್ಯಾಟ್ ನಲ್ಲಿ ಈ ಘಟನೆ ನಡೆದಿದೆ. ಗೆಳೆಯರ ಜೊತೆ ಆಟವಾಡುತ್ತಿದ್ದ ಸಾಹಿಲ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ.
ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق