ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಕ ಆತ್ಮಹತ್ಯೆಗೆ ಶರಣು

ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಕ ಆತ್ಮಹತ್ಯೆಗೆ ಶರಣು



 ಕುಂದಾಪುರ : ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಕ ಕಟ್ಟೆ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) (80) ಗುರುವಾರ ಬೆಳಗ್ಗೆ 6.15ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅವರು ಕೋಟೇಶ್ವರ ಸಮೀಪದ ಕುದ್ರೆಕೆರೆ ಬೆಟ್ಟು ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ತನ್ನದೇ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲಕರಾಗಿದ್ದರು. ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post