ತುಮಕೂರು : ಕೋಳಿಗಳನ್ನು ತುಂಬಿಕೊಂಡು ವೇಗವಾಗಿ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಸ್ಥಳದಲ್ಲೇ ನೂರಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿರುವ ಘಟನೆಯೊಂದು ಗುಬ್ಬಿ ಪಟ್ಟಣದ ಹೊರವಲಯದ ಸಿಂಗೋನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ಸಿಂಗೋನಹಳ್ಳಿ ಸೇತುವೆ ಬಳಿ ಕೋಳಿಗಳನ್ನು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಲಾರಿಯೊಂದು ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಚಾಲಕ ಮೃತಪಟ್ಟಿದ್ದು, ಲಾರಿಯಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಬಗ್ಗೆ ಗುಬ್ಬಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment