ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು ಪ್ರವಾಸೋದ್ಯಮ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರಕ್ಕೆ ಸಿದ್ಧತಾ ಸಭೆ

ಮಂಗಳೂರು ಪ್ರವಾಸೋದ್ಯಮ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರಕ್ಕೆ ಸಿದ್ಧತಾ ಸಭೆ


ಮಂಗಳೂರು: ಮಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಹೆಚ್ಚಿನ ಪ್ರಚಾರ ನೀಡುವ ನಿಟ್ಟಿನಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಸಾಮಾಜಿಕ ಜಾಲತಾಣ ಬಳಕೆದಾರರೊಂದಿಗೆ ಕೊಡಿಯಾಲಬೈಲ್ ನಲ್ಲಿರುವ ಅಟಲ್ ಸೇವಾ ಕೇಂದ್ರದಲ್ಲಿ ಸಭೆ ನಡೆಸಿದರು.


ಈ ವೇಳೆ ಮಾತನಾಡಿದ ಅವರು, ನಗರದ ಪ್ರವಾಸಿ ಕೇಂದ್ರಗಳು, ಖಾದ್ಯಗಳು, ದೇವಸ್ಥಾನಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದ ಸದ್ಬಳಕೆ ಮಾಡುವಂತೆ ಬಳಕೆದಾರರಲ್ಲಿ ವಿನಂತಿಸಿದರು‌.


ಮೆಡಿಕಲ್ ಟೂರಿಸಮ್, ಧಾರ್ಮಿಕ ಕ್ಷೇತ್ರಗಳು, ಐತಿಹಾಸಿಕ ಪ್ರದೇಶಗಳು, ಶಿಕ್ಷಣ ವ್ಯವಸ್ಥೆ ಸೇರಿದಂತೆ ಎಲ್ಲವನ್ನೂ #MarvellousMangalore ಹ್ಯಾಷ್ ಟ್ಯಾಗ್ ಮೂಲಕ ಪರಿಚಯಿಸುವ‌ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಮಂಗಳೂರು ನಗರದ ಆರೋಗ್ಯ ಕ್ಷೇತ್ರ,ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರಗಳ ಕುರಿತು ದೇಶಕ್ಕೆ ತಿಳಿಸಲು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮ ಬಳಕೆಯಾಗಲಿ ಎಂದು ಹೇಳಿದರು.

ನಗರದ ಪೇಜ್ ಅಡ್ಮಿನ್, ಬ್ಲಾಗರ್, ಸಾಮಾಜಿಕ ಜಾಲತಾಣ ಬಳಕೆದಾರರು ಸಭೆಯಲ್ಲಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post