ನಿಡ್ಡೋಡಿ: ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ) ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ಮೇ 16) ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ ಶ್ರೀಮತಿ ಸಂಗೀತ ಭಾಸ್ಕರ ದೇವಸ್ಯ ರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಮಕ್ಕಳಿಗೆ ಶುಭವನ್ನು ಹಾರೈಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸಿಹಿಯನ್ನು ಹಂಚಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಕೆ ರಾಘವೇಂದ್ರ ಭಟ್, ಕೈಗಾರಿಕಾ ತರಬೇತಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಅನುರಾಧಾ ಸಾಲಿಯಾನ್, ಶಾಲಾ ಪ್ರಾಂಶುಪಾಲೆ ಶ್ರೀಮತಿ ದಿವ್ಯ ಎಸ್ ನಾಯಕ್, ಬೋಧಕ ಹಾಗೂ ಬೋಧಕೇತರ ವೃಂದ ಮಕ್ಕಳ ಪಾಲಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق