ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ. ಎನ್‌ಎಸ್‌ಎಎಂ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.97.91% ಫಲಿತಾಂಶ

ಡಾ. ಎನ್‌ಎಸ್‌ಎಎಂ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.97.91% ಫಲಿತಾಂಶ


ನಿಟ್ಟೆ: ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಅಂಗ ಸಂಸ್ಥೆಗಳಲ್ಲೊಂದಾದ ಡಾ. ಎನ್.ಎಸ್.ಎ.ಎಂ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ 2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.97.91% ಫಲಿತಾಂಶ ದೊರೆತಿದೆ. ಈ ಬಾರಿ 48 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 47 ಮಂದಿ ಉತ್ತೀರ್ಣರಾಗಿರುತ್ತಾರೆ.


ಇವರಲ್ಲಿ 27 ಮಂದಿಗೆ ವಿಶಿಷ್ಟ ಶ್ರೇಣಿ (ಡಿಸ್ಟಿಂಕ್ಷನ್), 13 ಮಂದಿಗೆ ಫಸ್ಟ್ ಕ್ಲಾಸ್ ಅಂಕಗಳು ಲಭಿಸಿದೆ. ವಿದ್ಯಾರ್ಥಿ ನಿಶ್ಮಿತ್ 621 (99.36%) ಅಂಕಗಳನ್ನು ಗಳಿಸುವ ಮೂಲಕ ಕನ್ನಡ ಮಾಧ್ಯಮ ವಿಭಾಗದಲ್ಲಿ ಕಾರ್ಕಳ ತಾಲೂಕಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ವಿದ್ಯಾರ್ಥಿ ನಿಖಿಲ್ ನಾಯಕ್ 617 (98.72%) ಹಾಗೂ ವಿದ್ಯಾರ್ಥಿನಿ ಶ್ರದ್ಧಾ 609 (97.44%) ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ ಎಂದು ಶಾಲಾ ಆಡಳಿತ ವರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم