ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರು, ಉಳ್ಳಾಲ ತಾಲೂಕು ಚುಸಾಪ ಅಧ್ಯಕ್ಷರ ನೇಮಕ

ಪುತ್ತೂರು, ಉಳ್ಳಾಲ ತಾಲೂಕು ಚುಸಾಪ ಅಧ್ಯಕ್ಷರ ನೇಮಕ


ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಅಬ್ದುಲ್ ಸಮದ್ ಬಾವ

ಪುತ್ತೂರು: ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಹಿರಿಯ ಕವಿ ಅಬ್ದುಲ್ ಸಮದ್ ಬಾವ ಅವರು ನೇಮಕಗೊಂಡಿದ್ದಾರೆ. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಇತ್ತೀಚೆಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ 'ಕಾವ್ಯ ಸಂಚಯ, ಕಥಾ ಸಮಯ, ಸನ್ಮಾನ ಮತ್ತು ಕೃತಿ ಬಿಡುಗಡೆ' ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರು ಜಿಲ್ಲಾ ಗೌರವಾಧ್ಯಕ್ಷ ಇರಾ ನೇಮು ಪೂಜಾರಿಯವರ ಶಿಫಾರಸ್ಸಿನಂತೆ ನೇಮಕ ಮಾಡಿ ಘೋಷಣೆ ಮಾಡಿದರು.


ಉಳ್ಳಾಲ ತಾಲೂಕು ಚುಸಾಪ ಅಧ್ಯಕ್ಷರಾಗಿ ಎಡ್ವರ್ಡ್ ಲೋಬೋ

ಉಳ್ಳಾಲ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಎಡ್ವರ್ಡ್ ಲೋಬೋ ಅವರು ನೇಮಕಗೊಂಡಿದ್ದಾರೆ.  ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಇತ್ತೀಚೆಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ ಕಾವ್ಯ ಸಂಚಯ, ಕಥಾ ಸಮಯ, ಸನ್ಮಾನ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರು ಜಿಲ್ಲಾ ಗೌರವಾಧ್ಯಕ್ಷ ಇರಾ ನೇಮು ಪೂಜಾರಿಯವರ ಶಿಫಾರಸ್ಸಿನಂತೆ ನೇಮಕ ಮಾಡಿ ಘೋಷಣೆ ಮಾಡಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم