ಮಂಗಳೂರು: ಮಂಗಳೂರಿನ ರಾಮಕೃಷ್ಣ ಮಠಕ್ಕೆ 75 ವರ್ಷಗಳ ಸಂಭ್ರಮಾಚರಣೆಯ ಅಮೃತ ಮಹೋತ್ಸವ ಅತೀ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಅನೇಕ ವರ್ಷಗಳಿಂದ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ರಾಮಕೃಷ್ಣ ಮಠಕ್ಕೆ ಜೂನ್ 3 ನೇ ತಾರೀಕಿಗೆ 75 ಸಂವತ್ಸರ ಪರಿಪೂರ್ಣವಾಗುತ್ತಿದೆ. ಈ ನಿಟ್ಟಿನಲ್ಲಿ ಜೂನ್ 3 ಹಾಗೂ 4 ತಾರೀಕಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ವಿಶೇಷವಾಗಿ ಶ್ರೀ ಮಠದ ಮಹಾದ್ವಾರ ಲೋಕಾರ್ಪಣೆ, ಸಾಧು ನಿವಾಸ ಅಮೃತ ಸದನ ಉದ್ಘಾಟನೆ, ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳ ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜನ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಕಾರ್ಯಕ್ರಮದಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಅನೇಕ ಸಾಧು ಸಂತರು, ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಜನರು ತನು, ಮನ, ಧನವಿತ್ತು ಸಹಕರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಮಾಡಿಕೊಂಡಿದ್ದಾರೆ.
Post a Comment