ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವಿಧ ಅಭಿವೃದ್ಧಿ ಕಾಮಗಾರಿಗಳು, ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ತಲುಪಿಸಿ: ಕಾರ್ಯಕರ್ತರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಕರೆ

ವಿವಿಧ ಅಭಿವೃದ್ಧಿ ಕಾಮಗಾರಿಗಳು, ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ತಲುಪಿಸಿ: ಕಾರ್ಯಕರ್ತರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಕರೆ

ಮಂಗಳೂರು ನಗರದ ಅಭಿವೃದ್ಧಿಗೆ ವಿವಿಧ ಯೋಜನೆಯಡಿ ಮೂರೂವರೆ ಸಾವಿರ ಕೋಟಿ ರೂ ಬಿಡುಗಡೆ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ತಿಂಗಳ ಕಾರ್ಯ ನಿರ್ವಹಣಾ ತಂಡದ ಸಭೆ



ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ತಿಂಗಳ ಕಾರ್ಯ ನಿರ್ವಹಣಾ ತಂಡದ ಸಭೆ ಡೊಂಗರಕೇರಿ ಶ್ರೀ ಭುವನೇಂದ್ರ ಸಭಾ ಭವನದಲ್ಲಿ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ಅದ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ ವೇದವ್ಯಾಸ ಕಾಮತ್‌ ಅವರ ಉಪಸ್ಥಿತಿಯಲ್ಲಿ ಜರುಗಿತು.


ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರಾದ ಡಿ ವೇದವ್ಯಾಸ ಕಾಮತ್‌ ಅವರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ವಿವಿಧ ಯೋಜನೆಯಡಿಯಲ್ಲಿ ಸುಮಾರು ಮೂರುವರೆ ಸಾವಿರ ಕೋಟಿ ರೂಪಾಯಿ ಹಣ ಮಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬಿಡುಗಡೆಗೊಂಡಿದ್ದು, ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಾ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡೆಬೇಕೆಂದು ಕರೆ ನೀಡಿದರು.


ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿ ಶ್ರೀಮತಿ ಕಸ್ತೂರಿ ಪಂಜ ಅವರು ಪಕ್ಷದ ಸಂಘಟನೆ ಹಾಗೂ ಮುಂದಿನ ಕಾರ್ಯ ಯೋಜನೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೆ ವಿವಿಧ ಮೋರ್ಚಾಗಳು ಮಂಡಿಸಿದ ವರದಿಗಳನ್ನು ಪಡೆದುಕೊಂಡರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್ ಅವರು ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಎಂಟು ವರ್ಷಗಳು ಪೂರ್ಣ ಗೊಳ್ಳುವ ಸಂದರ್ಭದಲ್ಲಿ ಪಕ್ಷವು ದೇಶಾದ್ಯಂತ 15 ದಿನಗಳ ಕಾಲ ಜನಸಂಪರ್ಕ ಅಭಿಯಾನ ನಡೆಸಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.


ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಮಂಡಲ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರು ಈ ತಿಂಗಳು ನಡೆಯುವ ಮನ್ ಕಿ ಬಾತ್ ಕಾರ್ಯಕ್ರಮವನ್ನು ಕಾರ್ಯನಿರ್ವಹಣಾ ತಂಡ ಸಭೆಯ ಅಪೇಕ್ಷಿತರು ತಮಗೆ ನಿಯೋಜಿಸಲ್ಪಟ್ಟ ಬೂತ್ ಅಧ್ಯಕ್ಷರ ಮನೆಯಲ್ಲಿ ವೀಕ್ಷಿಸಬೇಕು ಎಂದು ಹೇಳುತ್ತಾ ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿಸುವಲ್ಲಿ ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಮಂಡಲ ಉಪಾಧ್ಯಕ್ಷರಾದ ರಮೇಶ್ ಹೆಗ್ಡೆ ಸ್ವಾಗತಿಸಿ, ಕಿರಣ್ ರೈ ಧನ್ಯವಾದ ಸಮರ್ಪಿಸಿದರು.


ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ ಕಾರ್ಯಕ್ರಮ ನಿರೂಪಣೆ ಮಾಡಿದರು. ಈ  ಸಂದರ್ಭದಲ್ಲಿ ಮಾಜಿ ಉಸ್ತುವಾರಿ ಸಚಿವರಾದ ನಾಗರಾಜ ಶೆಟ್ಟಿ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರ್, ಜಿಲ್ಲಾ ಉಪಾಧ್ಯಕ್ಷರು ಹಾಗೂ ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್, ಮನಪಾ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮೂಡ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ಆರ್.ಸಿ. ನಾರಾಯಣ, ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು ಹಾಗೂ ದೀಪಕ್ ಪೈ, ಮಂಡಲದ ಪದಾಧಿಕಾರಿಗಳು, ಮಂಡಲ ಸಮಿತಿ ಸದಸ್ಯರು, ಮಂಡಲದ ಜಿಲ್ಲಾ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠದ ಸಂಚಾಲಕರು ಹಾಗೂ ಸಹ ಸಂಚಾಲಕರು ಹಾಗೂ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم