ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ನಟ ಸದಾನಂದ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ನಟ ಸದಾನಂದ

 


ಬೆಂಗಳೂರು: ಕಿರುತೆರೆಯ ಸೂಪರ್ ಹಿಟ್ `ಕಾಮಿಡಿ ಕಿಲಾಡಿಗಳು' ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ನಟ ಸದಾನಂದ ದಾಂಪತ್ಯ ಜೀವನ ಕ್ಕೆ ಕಾಲಿಟ್ಟರು.

ನಟ ಸದಾನಂದ ಮದುವೆಯ ಫೋಟೋಗಳ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. 

ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕು ಸುಲ್ತಾನ್‌ಪುರ ಗ್ರಾಮದ ಪ್ರತಿಭೆ ಸದಾನಂದ ದುರ್ಗಪ್ಪ ಕಾಳೆ ಅವರು ಖಾಸಗಿ ಚಾನೆಲ್‌ನ್ನ ಕಾಮಿಡಿ ಕಿಲಾಡಿಗಳು ಶೋ ಮೂಲಕ ಗುರುತಿಸಿಕೊಂಡಿದ್ದರು.

ತಮ್ಮ ಅಮೋಘ ನಟನೆಯಿಂದ ಗಮನ ಸೆಳೆದಿದ್ದ ನಟ ಸದಾನಂದ ಇಂದು ಸರಳವಾಗಿ ವಿವಾಹವಾಗಿದ್ದಾರೆ. ಸಾಕಷ್ಟು ಸೀರಿಯಲ್ ಮತ್ತು 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಸದಾನಂದ ಸರಳವಾಗಿ ದೇವಸ್ಥಾನದಲ್ಲಿ ಮದುವೆ ಆಗಿದ್ದಾರೆ. 


0 Comments

Post a Comment

Post a Comment (0)

Previous Post Next Post