ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ. ಆಶ್ರಯದಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಕಾಲೇಜು ವಾರ್ಷಿಕೋತ್ಸವ ಸೋಮವಾರ ಸಂಜೆ 5 ಗಂಟೆಗೆ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ನಡೆಯುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ತಿಳಿಸಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾರಂಭವನ್ನು ಉದ್ಘಾಟಿಸುವರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ.ಯ ಕುಲಸಚಿವ ಎಂ. ಆರ್. ರವಿಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಕಾರ್ಯದರ್ಶಿ ಡಾ. ಸತೀಶ್ಚಂದ್ರ ಶುಭಾಶಂಸನೆ ಮಾಡುವರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق