ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪತಿ ಕಟ್ಟಿಂಗ್ ಮಿಷನ್ ನಿಂದ ಪತ್ನಿ ಇಬ್ಬರು ಮಕ್ಕಳ ಕತ್ತು ಸೀಳಿ ಕೊಲೆ ಮಾಡಿ, ಆತ ಆತ್ಮಹತ್ಯೆ

ಪತಿ ಕಟ್ಟಿಂಗ್ ಮಿಷನ್ ನಿಂದ ಪತ್ನಿ ಇಬ್ಬರು ಮಕ್ಕಳ ಕತ್ತು ಸೀಳಿ ಕೊಲೆ ಮಾಡಿ, ಆತ ಆತ್ಮಹತ್ಯೆ

 


ಚೆನ್ನೈ(ತಮಿಳುನಾಡು) : ಹಣದ ಕೊರತೆಯಿಂದ ಜೀವನ ನಡೆಸಲು ಕಷ್ಟವಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಪೋರ್ಟಬಲ್ ಎಲೆಕ್ಟ್ರಿಕ್‌ವುಡ್ ಕಟ್ಟರ್​ನಿಂದ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆಯೊಂದು ಚೆನ್ನೈನಲ್ಲಿ ಶನಿವಾರ ನಡೆದಿದೆ.

ಚೆನ್ನೈನ ಪೊಜಿಚಲೂರ್‌ನ ನಿವಾಸಿಗಳಾಗಿದ್ದ ಪ್ರಕಾಶ್ (41), ಅವರ ಪತ್ನಿ ಗಾಯತ್ರಿ ಮತ್ತು 13 ಮತ್ತು 9 ವರ್ಷದ ಇಬ್ಬರು ಮಕ್ಕಳು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಕುಟುಂಬಸ್ಥರು ಮನೆಯಿಂದ ಹೊರಬಾರದೇ ಇದ್ದಾಗ ಅನುಮಾನಗೊಂಡ ನೆರೆಹೊರೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಾಲ್ವರೂ ರಕ್ತದ ಮಡುವಿನಲ್ಲಿ ಕತ್ತು ಸೀಳಿಕೊಂಡು ಬಿದ್ದಿರುವುದು ಕಂಡು ಬಂದಿದೆ.


ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಸಿದಾಗ ಕುಟುಂಬದವರು ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದ ಕಾರಣ ಈ ರೀತಿಯ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


0 تعليقات

إرسال تعليق

Post a Comment (0)

أحدث أقدم