ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಟ್ರಕ್ ಮತ್ತು ಟೆಂಪೋ ಅಪಘಾತ; 7ಮಂದಿ ಸಾವು, 12 ಮಂದಿಗೆ ಗಾಯ

ಟ್ರಕ್ ಮತ್ತು ಟೆಂಪೋ ಅಪಘಾತ; 7ಮಂದಿ ಸಾವು, 12 ಮಂದಿಗೆ ಗಾಯ

 


ಲಕ್ನೋ:ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿರುವ ಘಟನೆಯೊಂದು ಇಂದು ಬೆಳಗ್ಗೆ ಉತ್ತರ ಪ್ರದೇಶದ ಬಹ್ರೈಚ್- ಲಖಿಂಪುರ ಖೇರಿ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಾಹನದೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

ಇನ್ನೂ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


ಈ ಟೆಂಪೋ ಟ್ರಾವೆಲರ್ ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿತ್ತು ಎನ್ನಲಾಗಿದೆ. ಬೀದರ್​ನ ಗಾಂಧಿಗಂಜ್​​ ಪ್ರದೇಶದ 16 ಮಂದಿ ಅಯೋಧ್ಯೆಗೆ ಶ್ರೀರಾಮ ಜನ್ಮಭೂಮಿ ಪೂಜೆಗೆಂದು ತೆರಳುತ್ತಿದ್ದರು. ಈ ಅಪಘಾತದಲ್ಲಿ ಟೆಂಪೋ ಚಾಲಕ ಸೇರಿ ಏಳು ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.


ಮೃತರನ್ನು ಶಿವಕುಮಾರ ಪೂಜಾರಿ (28), ಜಗದಾಂಬ (52), ಮನ್ಮತ್ (36), ಅನಿಲ್ (30), ಸಂತೋಷ್ (35), ಶಶಿಕಲಾ (38) ಮತ್ತು ಸರಸ್ವತಿ (47) ಎಂದು ಗುರುತಿಸಲಾಗಿದೆ.


0 Comments

Post a Comment

Post a Comment (0)

Previous Post Next Post