ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವೀರಪ್ಪನ್ ಹಿರಿಯ ಸಹೋದರ ಮಾದಯ್ಯನ್ ನಿಧನ

ವೀರಪ್ಪನ್ ಹಿರಿಯ ಸಹೋದರ ಮಾದಯ್ಯನ್ ನಿಧನ

 


ಚೆನೈ:ಕುಖ್ಯಾತ ಕಾಡುಗಳ್ಳ ವೀರಪ್ಪನ್‌ನ ಹಿರಿಯ ಸಹೋದರ ಮಾದಯ್ಯನ್ ಬುಧವಾರ ಮುಂಜಾನೆ ಸೇಲಂನ ಸರ್ಕಾರಿ ಮೋಹನ್ ಕುಮಾರಮಂಗಲಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೇಲಂ ಸೆಂಟ್ರಲ್ ಜೈಲಿನಲ್ಲಿ 80 ವರ್ಷದ ಮಾದಯ್ಯನ್ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು. ಮತ್ತು ಮೇ 1 ರಂದು ತೀವ್ರ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು.

1987ರಲ್ಲಿ ಅರಣ್ಯ ರಕ್ಷಕ ಚಿದಂಬರಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈರೋಡ್‌ನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಕಳೆದ 34 ವರ್ಷಗಳಿಂದ ಜೈಲಿನಲ್ಲಿದ್ದ.  

ಕೊಲೆ ಪ್ರಕರಣದಲ್ಲಿ ಮೈಸೂರಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಈತನನ್ನು ಕೊಯಮತ್ತೂರು ಮತ್ತು ಸೇಲಂ ಜೈಲಿಗೆ ಸ್ಥಳಾಂತರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post