ನಿಡ್ಡೋಡಿ: ಜ್ಞಾನರತ್ನ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧೀನಕ್ಕೊಳಪಟ್ಟ ಸಂಸ್ಥೆಯಾದ ಶ್ರೀ ದುರ್ಗಾ ದೇವಿ ಆಂಗ್ಲ ಮಾಧ್ಯಮ ಶಾಲೆ ನಿಡ್ಡೋಡಿಯಲ್ಲಿ ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು (ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನೆ ಯೋಜನೆ) ಇವರ ಸಂಯೋಜನೆಯಲ್ಲಿ ಶ್ರೀ ದುರ್ಗಾದೇವಿ ಶಿಕ್ಷಣ ಸಂಸ್ಥೆಯ ಶಿಕ್ಷಕ ಶಿಕ್ಷಕೇತರರಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಜ್ಞಾನರತ್ನ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಉದ್ಗಾಟಿಸಿ ಕಾರ್ಯಾಗಾರಕ್ಕೆ ಶುಭಹಾರೈಸಿದರು.
ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಜ್ಞಾ ಸಲಹಾ ಕೇಂದ್ರದ ಸಂಪನ್ಮೂಲ ವ್ಯಕ್ತಿ ಡಾ. ಜಾನ್ ಕ್ಲಾರೆನ್ಸ್ ಮಿರಾಂದ, ಯೋಜನಾ ಸಂಯೋಜಕರಾದ ವಿಲಿಯಂ ಸಾಂಎಲ್, ವಲಯ ಸಂಯೋಜಕ ಅಶೋಕ, ಯೋಜನ ಮೌಲ್ಯಮಾಪಕಿ ರೇಷ್ಮಾ, ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಶ್ರೀ ಕೆ. ರಾಘವೇಂದ್ರ ಭಟ್ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿ ಡಾ. ಜಾನ್ ಕ್ಲಾರೆನ್ಸ್ ಮಿರಾಂದ ಶಿಕ್ಷಕರಿಗೆ ಹಮ್ಮಿಕೊಳ್ಳಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ ಪರಿಣಾಮಕಾರಿ ಬೋಧನೆಗೆ ಬೇಕಾದ ಕೌಶಲ್ಯಗಳು, ಶಿಕ್ಷಕ ಹಾಗೂ ಮಕ್ಕಳ ನಡುವಿನ ಬಾಂಧವ್ಯ, ಮಕ್ಕಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ, ಮಕ್ಕಳ ಖಿನ್ನತೆ ನಿಬಾಯಿಸುವಲ್ಲಿ ಶಿಕ್ಷಕರ ಪಾತ್ರ, ಈ ಎಲ್ಲಾ ವಿಷಯಗಳ ಕುರಿತು ಸವಿಸ್ತಾರವಾಗಿ ಸಂವಾದ ನಡೆಸಿ ಮಾರ್ಗದರ್ಶನ ನೀಡಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment