ಬೆಂಗಳೂರು: ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆಯೊಂದು ಆರ್ಪಿಸಿ ಲೇಔಟ್ನ ಬಸ್ ನಿಲ್ದಾಣದ ಬಳಿ ನಡೆದಿದೆ.
ಬಸ್ ನಿಲ್ದಾಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕ್ರಿಸ್ಟಾ ಹಾಗೂ ಕ್ವಾಲಿಸ್ ಕಾರುಗಳು ಪರಸ್ಪರ ಡಿಕ್ಕಿಯಾಗಿದ್ದು, ಈ ವೇಳೆ ಅದೇ ಮಾರ್ಗವಾಗಿ ಬಂದ ಮತ್ತೊಂದು ಕಾರು ಅಪಘಾತ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Post a Comment