ಹಾಸನ: ಸಾರಿಗೆ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಸಾವಿಗೀಡಾದ ಘಟನೆಯೊಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಕಾರಿನಲ್ಲಿದ್ದ ಚಂದ್ರಶೇಖರ್ (55) ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಪತ್ನಿ ಶಾರದಾ (52) ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಮೃತರು ಸಕಲೇಶಪುರ ತಾಲೂಕಿನ ಬ್ಯಾಕರವಹಳ್ಳಿ ಸಮೀಪದ ಕುಣಿಗಲ್ ಗ್ರಾಮದವರಾಗಿದ್ದು, ಚಂದ್ರಶೇಖರ್ ಹಳೇಕೆರೆ ಗ್ರಾಮದ ಕಾಫಿ ತೋಟದಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು.
ಹಾಸನದ ತಮ್ಮ ಮಗಳ ಮನೆಯಲ್ಲಿ ಏರ್ಪಡಿಸಿದ್ದ ದೇವರ ಪೂಜಾ ಕಾರ್ಯವನ್ನು ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಮಂಗಳೂರಿನಿಂದ ಬೆಂಗಳೂರು ಮಾರ್ಗವಾಗಿ ಹೋಗುತ್ತಿದ್ದ ಬಸ್‌ಗೆ ಡಿಕ್ಕಿಯಾಗಿದೆ.
ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಕೆಎಸ್‌ಆರ್‌ಟಿಸಿ ಬಸ್ ಬಿ.ಸಿ.ರೋಡ್ ಘಟಕಕ್ಕೆ ಸೇರಿದ್ದಾಗಿದೆ.
ಸಕಲೇಶಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Post a Comment