ತುಮಕೂರು: ಕುಣಿಗಲ್ ಪಟ್ಟಣದ ಬೇಗೂರು ಬ್ರಿಡ್ಜ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇನೋವಾ ಕಾರು ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ.
ಶನಿವಾರ ಬೆಳಿಗ್ಗೆ ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಇನೋವಾ ಕಾರು ತೆರಳುತ್ತಿತ್ತು. ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತ್ತಿತ್ತು. ಮಾರ್ಗಮಧ್ಯೆ ಬೇಗೂರು ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಡಿವೈಡರ್ ದಾಟಿ ಟಿಟಿ ವಾವನಕ್ಕೆ ಡಿಕ್ಕಿಯಾಗಿದೆ.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪಕ್ಕದಲ್ಲಿ ಸಾಗುತ್ತಿದ್ದ ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಬೆಂಗಳೂರು ಮೂಲದವರಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
إرسال تعليق