ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎರಡು ವಾಹನಗಳ ನಡುವೆ ಅಪಘಾತ; ಓರ್ವ ಸಾವು

ಎರಡು ವಾಹನಗಳ ನಡುವೆ ಅಪಘಾತ; ಓರ್ವ ಸಾವು

 


ತುಮಕೂರು: ಬೈಕ್ ಹಾಗೂ ಬೊಲೆರೋ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಜಿಲ್ಲೆಯ ತಿಪಟೂರು ತಾಲೂಕಿನ ಹಾಲೇನಹಳ್ಳಿ ಗೇಟ್ ಬಳಿ ನಡೆದಿದೆ.


ತಿಪಟೂರು ತಾಲೂಕಿನ ಹಾಲ್ಕುರಿಕೆ ಗ್ರಾಮದ ನಿವಾಸಿ ಮಂಜುನಾಥ್​ (38) ಮೃತ ದುರ್ದೈವಿ.


ಮಂಜುನಾಥ್​ ತಿಪಟೂರು ಕಡೆಯಿಂದ ಹಾಲ್ಕುರಿಕೆ ಕಡೆಗೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಕುಳಿತಿದ್ದ ಮಂಜುನಾಥ್ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುವನ್ನು ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನಾ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಬಗ್ಗೆ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 Comments

Post a Comment

Post a Comment (0)

Previous Post Next Post