ತಿರುವನಂತಪುರಂ: ಎರಡು ಬೈಕ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆಯೊಂದು ವಿಝಿಂಜಂ ಮುಕ್ಕೋಳದಲ್ಲಿ ನಡೆದಿದೆ.
ಮೃತರನ್ನು ಚೌವಾರ ಮೂಲದ ಶರತ್ ಮತ್ತು ವಟ್ಟಿಯೂರ್ಕಾವು ನೆಟ್ಟಯಂ ಮೂಲದ ಮುಹಮ್ಮದ್ ಹ್ಯಾರಿಸ್ ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ (ಜೂನ್ 19) ಮುಕ್ಕೋಳದ ಬೈಪಾಸ್ನಲ್ಲಿ ಈ ಘಟನೆ ನಡೆದಿದೆ.
ಯುವಕರು ಬೈಕ್ ರೇಸ್‌ನಲ್ಲಿ ತೊಡಗಿದ್ದ ಸಂದರ್ಭದಲ್ಲಿ ಬೈಕ್‌ಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತು. ಅಷ್ಟು ಹೊತ್ತಿಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.
ಸುದ್ದಿ ತಿಳಿದ ತಕ್ಷಣ ವಿಝಿಂಜಂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಕೈಗೊಂಡರು.
ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ತಿರುವನಂತಪುರಂ ವೈದ್ಯಕೀಯ ಕಾಲೇಜು ಶವಾಗಾರಕ್ಕೆ ರವಾನಿಸಿದರು.
ಅಪಘಾತದ ದೃಶ್ಯ ಮೊಬೈಲ್ವೊಂದರಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment