ಬೆಂಗಳೂರು : ಕುಟುಂಬದವರೊಂದಿಗೆ ಒಟ್ಟಾಗಿ ಗೋವಾಗೆ ತೆರಳಿದ್ದ ಕನ್ನಡ ಚಲನಚಿತ್ರ ನಟ ದಿಗಂತ್ ಅವರು ಸಮ್ಮರ್ ಸಾಲ್ಟ್ ಮಾಡುವಾಗ ಆಕಸ್ಮಿಕವಾಗಿ ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯ ಮಾಡಿಕೊಂಡ ಹಿನ್ನೆಲೆ ಅವರನ್ನು ಗೋವಾದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ಸತತ ಮೂರು ಘಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯ ದಿಗಂತ್ ಅವರನ್ನು ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ಅಬ್ಸರ್ವೇಶನ್ ನಲ್ಲಿ ಇರಿಸಿದ್ದೇವೆ, ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
إرسال تعليق