ಬೆಂಗಳೂರು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ಜೈಜಗದೀಶ್ ಮತ್ತಿತರರ ವಿರುದ್ಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಈ ವಿಚಾರದ ಬಗ್ಗೆ ಪ್ರಕರಣ ದಾಖಲಾಗಿದೆ.
ಜೂನ್ 5ರಂದು ಈ ಘಟನೆ ನಡೆದಿದ್ದು, ಜಯರಾಮೇಗೌಡ ಎಂಬವರು ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು.
ಈ ಸಮಯದಲ್ಲಿ ಅವರು ನಿರ್ವಾಹಕನಿಗೆ ಹೇಳಿ ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ.
ಈ ಸಂದರ್ಭದಲ್ಲಿ ಹಿಂದಿನಿಂದ ಕಾರಿನಲ್ಲಿ ಬಂದ ನಟ ಜೈಜಗದೀಶ್ ಮತ್ತಿತರರು, ಯಾಕೋ ಬಸ್ಸಿನಿಂದ ಬಾಟಲಿ ಎಸೆಯುತ್ತೀಯಾ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ವಿಷಯದ ಬಗ್ಗೆ ಇದೀಗ ಪ್ರಕರಣ ದಾಖಲಾಗಿದೆ.
Post a Comment