ಬೆಂಗಳೂರು : ಪೊಲೀಸ್ ಇಲಾಖೆಯ ಅಸಿಸ್ಟಂಟ್ ಸಬ್ಇನ್ಸ್ಪೆಕ್ಟರ್ (ಎಎಸ್ಐ) ಮಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಎಚ್ಎಸ್ಆರ್ ಪೊಲೀಸ್ ಠಾಣೆಯ ಎಎಸ್ಐ ನಾಗರಾಜ್ ಅವರ ಮಗ ಪ್ರಶಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ನಗರದ ವಿಜಯ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ. ಬೆಂಗಳೂರು ಹೊರವಲಯ ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿನ್ನೆ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಶಾಂತ್ ನನ್ನು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق