ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 'ಅಗ್ನಿಪಥ್‌' ಯೋಜನೆ ಬಗ್ಗೆ ಕಾರಣವಿಲ್ಲದೆ ವಿರೋಧ: ಜನಜಾಗೃತಿ ಮೂಡಿಸಲು ಬಿಜೆಪಿ ಕ್ರಮ

'ಅಗ್ನಿಪಥ್‌' ಯೋಜನೆ ಬಗ್ಗೆ ಕಾರಣವಿಲ್ಲದೆ ವಿರೋಧ: ಜನಜಾಗೃತಿ ಮೂಡಿಸಲು ಬಿಜೆಪಿ ಕ್ರಮ

ಬಿಜೆಪಿ ಮಂಗಳೂರು ದಕ್ಷಿಣ ಮಂಡಲ: ತಿಂಗಳ ನಿರ್ವಹಣಾ ತಂಡದ ಸಭೆ


ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ತಿಂಗಳ ಕಾರ್ಯ ನಿರ್ವಹಣಾ ತಂಡದ ಸಭೆ ಡೊಂಗರಕೇರಿ ಶ್ರೀ ಸುಧೀಂದ್ರ ಸಭಾ ಭವನದಲ್ಲಿ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ಅದ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ ವೇದವ್ಯಾಸ ಕಾಮತ ಅವರ ಉಪಸ್ಥಿತಿಯಲ್ಲಿ ಜರುಗಿತು.


ಸಭೆಯನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಅವರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಸೇನಾ ನೇಮಕಾತಿ "ಅಗ್ನಿಪಥ್" ಯೋಜನೆ ಬಗ್ಗೆ ಮಾಹಿತಿಯನ್ನು ನೀಡುತ್ತಾ ವಿಪಕ್ಷಗಳು ಕೇಂದ್ರ ಸರ್ಕಾರ ಜಾರಿಮಾಡುವ ಎಲ್ಲ ಯೋಜನೆಗಳನ್ನು ಯಾವುದೇ ಕಾರಣವಿಲ್ಲದೆ ವಿರೋಧಿಸಿ ದೇಶದಲ್ಲಿ ಅನಾವಶ್ಯವಾಗಿ ಗೊಂದಲ ಸೃಷ್ಟಿಸುತ್ತಿವೆ ಎಂದು ನುಡಿದರು.


ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿ ಶ್ರೀಮತಿ ಕಸ್ತೂರಿ ಪಂಜ ಅವರು ಪಕ್ಷದ ಸಂಘಟನಾತ್ಮಕ ವಿಷಯಗಳ ಬಗ್ಗೆ ಮಾತನಾಡಿ, ಪಕ್ಷದ ಮುಂದಿನ ಕಾರ್ಯ ಯೋಜನೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೂಪ ಡಿ ಬಂಗೇರ ಅವರು ವಿವಿಧ ಮೋರ್ಚಾಗಳು ಮಂಡಿಸಿದ ವರದಿಗಳನ್ನು ಪಡೆದುಕೊಂಡರು.


ಜಿಲ್ಲಾ ಉಪಾಧ್ಯಕ್ಷರು ಹಾಗೂ ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎಂಟು ವರ್ಷಗಳ ಸಾಧನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಮಂಡಲ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷ ಸಂಭ್ರಮಾಚರಣೆಯ ಅಂಗವಾಗಿ ದಕ್ಷಿಣ ಮಂಡಲದಲ್ಲಿ ಸೇವೆ, ಸುಶಾಸನ, ಬಡವರ ಕಲ್ಯಾಣ ಅಭಿಯಾನ ಯಶಸ್ವಿಯಾಗಿ ನಡೆದಿರುವುದಕ್ಕೆ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತ  ಮುಂದೆ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕರ್ತರ ಸಹಕಾರವನ್ನು ಕೋರಿದರು.


ಮಂಡಲ ಉಪಾಧ್ಯಕ್ಷರಾದ ಶ್ರೀಮತಿ ಮೀರಾ ಕರ್ಕೇರ ಸ್ವಾಗತಿಸಿ, ಕಾರ್ಯದರ್ಶಿ ಲಲ್ಲೇಶ್ ಧನ್ಯವಾದ ಸಮರ್ಪಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೆ ಕಾರ್ಯಕ್ರಮ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಮ.ನ.ಪಾ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮೂಡ ಅಧ್ಯಕ್ಷರಾದ ರವಿಶಂಕರ್ ಮೀಜಾರ್, ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು ಕಿರಣ್ ರೈ, ದೀಪಕ್ ಪೈ, ರಮೇಶ್ ಹೆಗ್ಡೆ, ಮಂಡಲದ ಪದಾಧಿಕಾರಿಗಳು, ಮಂಡಲದ ಜಿಲ್ಲಾ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠದ ಸಂಚಾಲಕರು ಹಾಗೂ ಸಹ ಸಂಚಾಲಕರು, ಸಾಮಾಜಿಕ ಜಾಲ ತಾಣ ಸಂಚಾಲಕರು ಹಾಗೂ ಸಹ ಸಂಚಾಲಕರು, ಮನ್ ಕಿ ಬಾತ್ ಸಂಚಾಲಕರು ಹಾಗೂ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم