ಬೆಂಗಳೂರು : ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರು ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಭಾನುವಾರದಂದು ಚುನಾಯಿತರಾಗಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಆಡಳಿತ ನಡೆಸಲಿದ್ದಾರೆ.
ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಪರಿಷತ್ತಿನ ಪದಾಧಿಕಾರಿಗಳು ಮತ್ತು ಕಾರ್ಯಾಕಾರಿ ಸಮಿತಿ ಸದಸ್ಯರ ಆಯ್ಕೆ ಚುನಾವಣೆ ನಡೆಯಿತು.
ಈ ಸಂದರ್ಭದಲ್ಲಿ ಬಿ.ಎಲ್.ಶಂಕರ್ ಅವರು ಒಟ್ಟು 122 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಪ್ರೊ.ಕೆ.ಇ.ರಾಧಾಕೃಷ್ಣ ಕೇವಲ 20 ಮತಗಳನ್ನು ಪಡೆದರು.
ಬಹುಮತ ಪಡೆಯುವ ಮೂಲಕ ಬಿ.ಎಲ್.ಶಂಕರ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
إرسال تعليق