ಮಂಗಳೂರು: ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಡಾ|| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ದಿನವನ್ನು "ಬಲಿದಾನ ದಿವಸ"ವನ್ನಾಗಿ ಶ್ರೀ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ಆಚರಿಸಲಾಯಿತು. ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೊಂಕಣಿ ಸಾಹಿತ್ಯ ಅಕಾಡಮಿ ಸದಸ್ಯರಾದ ಅರುಣ್ ಜಿ ಶೇಟ್ ಅವರು ಡಾ|| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜೀವನ ಚರಿತ್ರೆ ಬಗ್ಗೆ ಬೌದ್ಧಿಕ ಮಂಡನೆ ಮಾಡುತ್ತ ನೆಹರೂಗೆ ಪರ್ಯಾಯ ನಾಯಕ, ಸ್ವಾತಂತ್ರ್ಯೋತ್ತರದಲ್ಲಿ ಹಿಂದೂ ಶೋಷಣೆಯ ವಿರುದ್ಧ ಪ್ರಮುಖ ದನಿಯಾಗಿ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆದು ಜನ ಸಂಘ ಪಕ್ಷ ಕಟ್ಟಿ ಜಮ್ಮು ಕಾಶ್ಮೀರದಲ್ಲಿನ ಹಿಂದೂಗಳ ಪರವಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದ ಡಾ|| ಶ್ಯಾಮ ಪ್ರಸಾದ್ ಮುಖರ್ಜಿ ಅವರು ಅಖಂಡ ಭಾರತದ ಏಕತೆಗೆ ಶ್ರಮಿಸಿದ ಧೀಮಂತ ನಾಯಕ ಎಂದು ನುಡಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೂಪ ಡಿ ಬಂಗೇರ ವೈಯಕ್ತಿಕ ಗೀತೆ ಹಾಡಿದರು. ಮಂಡಲ ಕಾರ್ಯದರ್ಶಿ ಲಲ್ಲೇಶ್ ಧನ್ಯವಾದ ಸಮರ್ಪಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೆ ಕಾರ್ಯಕ್ರಮ ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಮ ನ ಪಾ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರ್, ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು, ಕಿರಣ್ ರೈ, ರಮೇಶ್ ಹೆಗ್ಡೆ, ಮಂಡಲದ ಪದಾಧಿಕಾರಿಗಳು, ಮನಪಾ ಸದಸ್ಯರು ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಸಾಮಾಜಿಕ ಜಾಲ ತಾಣ ಸಂಚಾಲಕರು ಹಾಗೂ ಸಹ ಸಂಚಾಲಕರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment