ರಕ್ತದಾನ, ಭೂಮಿ ಫಲವತ್ತತೆ ಕುರಿತು ಮಾಹಿತಿ ಕಾರ್ಯಕ್ರಮ
ಬೆಳ್ಳಾರೆ: ಸೇವಾ ಭಾರತಿ ಬೆಳ್ಳಾರೆ, ಗ್ರಾಮ ವಿಕಾಸ ಸಮಿತಿ ಬೆಳ್ಳಾರೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ, ಕುಂಬಾರರ ಗುಡಿ, ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರಿಂದ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಮತ್ತು ರಕ್ತ ವರ್ಗೀಕರಣ ಶಿಬಿರ ಹಾಗೂ ಭೂಮಿ ಫಲವತ್ತತೆ ಹೆಚ್ಚಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ, ಶಾಸಕ ಎಸ್. ಅಂಗಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್‍ನ ಸೀತಾರಾಮ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬೆಳ್ಳಾರೆ ಗ್ರಾಮ ಸ್ವರಾಜ್ ತಂಡದ ಆರ್.ಕೆ. ಭಟ್ ಕುರುಂಬುಡೇಲು, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ ಪನ್ನೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷ, ದಕ್ಷಿಣ ಕನ್ನಡ ಗೃಹರಕ್ಷಕ ದಳದ ಸಮಾದೇಷ್ಟ ಡಾ|| ಮುರಲೀಮೋಹನ್ ಚೂಂತಾರು, ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ ಎಂ. ಪೆರುವಾಯಿ, ಪ್ರಮುಖರಾದ ಶ್ರೀನಾಥ್ ರೈ ಬಾಳಿಲ, ಪದ್ಮನಾಭ ಶೆಟ್ಟಿ ಪೆರುವಾಜೆ, ಪ್ರೇಮಚಂದ್ರ ಭೆಳ್ಳಾರೆ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Post a Comment