ಕೊಡಗು: ದ್ವಿಚಕ್ರ ಮತ್ತು ಬೊಲೆರೋ ಅಪಘಾತದಲ್ಲಿ ಶಾಲಾ ಶಿಕ್ಷಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಜಿಲ್ಲೆಯ ಮರೂರು ಗ್ರಾಮದಲ್ಲಿ ನಡೆದಿದೆ.
ಅಶ್ವಿನಿ ಚೇತನ್(45) ಮೃತ ಶಿಕ್ಷಕಿ. ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಶಿಕ್ಷಕಿಯ ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರವಾಹನ ನುಜ್ಜುಗುಜ್ಜಾಗಿದೆ.
ತೀವ್ರ ಗಾಯಗೊಂಡ ಶಿಕ್ಷಕಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೊಲೆರೋ ವಾಹನ ಚಾಲಕನನ್ನು ವಶಕ್ಕೆ ಪಡೆದ ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Post a Comment