ಮೈಸೂರು: ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆಯೊಂದು ಮೈಸೂರು ಹುಣಸೂರು ರಸ್ತೆಯ ಮನುಗನಹಳ್ಳಿ ಸಮೀಪದಲ್ಲಿ ನಡೆದಿದೆ.
ಮೈಸೂರಿನಿಂದ ಹಾಸನ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ನುಗ್ಗಿ, ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ.
ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
إرسال تعليق