ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋವಿಡ್ ಪ್ರಕರಣ ಏರಿಕೆ; ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಕೋವಿಡ್ ಪ್ರಕರಣ ಏರಿಕೆ; ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

 


ಬೆಂಗಳೂರು : ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ಕರ್ನಾಟಕ ರಾಜ್ಯ ಸರ್ಕಾರ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯ ಕಚೇರಿಗಳು, ವಿದ್ಯಾ ಸಂಸ್ಥೆಗಳು, ಕಾಲೇಜುಗಳು ಹಾಗೂ ಅಪಾರ್ಟ್ಮೆಂಟ್ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.


ಕೋವಿಡ್ 19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್ಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆ ಪ್ರಕಟಿಸಿದೆ.


15ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾದಲ್ಲಿ ಎಲ್ಲರಿಗೂ ರ್ಯಾಪಿಡ್ ಟೆಸ್ಟ್ ಮಾಡಿಸಲಾಗುವುದು. ಸೋಂಕಿನ ಲಕ್ಷಣ ಇಲ್ಲದಿದ್ದರೆ, ಕೊರೊನಾ ಟೆಸ್ಟ್ ಅಗತ್ಯವಿಲ್ಲ ಎಂದು ತಿಳಿಸಿದೆ.


ಮನೆ ಕೆಲಸದವರು 60 ವರ್ಷಕ್ಕಿಂತ ಕೆಳಗಿನವರಾಗಿರಬೇಕು. ಮನೆ ಕೆಲಸಗಾರರು, ಸಿಬ್ಬಂದಿ ಎನ್ 95 ಮಾಸ್ಕ್ ಕಡ್ಡಾಯವಾಗಿ ಬಳಸಬೇಕು. 


ಕೊವಿಡ್ ಪತ್ತೆಯಾದಲ್ಲಿ ಪಾರ್ಕ್, ಸ್ವಿಮ್ಮಿಂಗ್ ಪೂಲ್, ಕ್ಲಬ್ ಹೌಸ್ಗಳನ್ನು ಮುಚ್ಚಬೇಕು. ಸೋಂಕು ಕಂಡು ಬಂದ ಫ್ಲೋರ್ ಹಾಗೂ ಅಪಾರ್ಟ್ಮೆಂಟ್ಗಳನ್ನು ಸೀಲ್ಡೌನ್ ಮಾಡಬೇಕು ಎಂದು ಸೂಚಿಸಿದೆ.

0 تعليقات

إرسال تعليق

Post a Comment (0)

أحدث أقدم