ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮರದಿಂದ ಬಿದ್ದು ಗಂಭೀರ ಗಾಯಗೊಂಡ ಯುವಕ ಸಾವು

ಮರದಿಂದ ಬಿದ್ದು ಗಂಭೀರ ಗಾಯಗೊಂಡ ಯುವಕ ಸಾವು

 


ವಿಟ್ಲ; ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆಯೊಂದು ವಿಟ್ಲದಲ್ಲಿ ನಡೆದಿದೆ.


ಮೃತ ಯುವಕನನ್ನು ಕಂಬಳಬೆಟ್ಟು ನಿವಾಸಿ ಯುವಕ ನಾಸಿರ್ ಎಂದು ಗುರುತಿಸಲಾಗಿದೆ.


ಆಟೋ ಚಾಲಕ ವೃತ್ತಿ ಮಾಡುತ್ತಿದ್ದ ಈತ ಇತ್ತೀಚೆಗೆ ಮರದ ಕೆಲಸದಲ್ಲಿ ತೊಡಗಿದ್ದು, ಮರದ ಕೆಲಸ ಮಾಡುತ್ತಿದ್ದ ವೇಳೆ ಮರದಿಂದ ಆಕಸ್ಮಿಕವಾಗಿ ಬಿದ್ದು ಗಂಭೀರ ಗಾಯಗೊಂಡಿದ್ದನು.

ತಕ್ಷಣವೇ ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

0 Comments

Post a Comment

Post a Comment (0)

Previous Post Next Post