ಧರ್ಮತ್ತಡ್ಕ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಪ್ರವೇಶೋತ್ಸವವು ಇಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಇವರು ವಹಿಸಿದರು. ಪಠ್ಯಾಧಾರಿತ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ಶಿಸ್ತು- ಪ್ರೌಢಿಮತೆಯನ್ನೂ ಮೈಗೂಡಿಸಿಕೊಳ್ಳಬೇಕು ಎಂಬುದಾಗಿ ಉಪದೇಶಿಸಿದರು.
ಶಾಲಾ ವ್ಯವಸ್ಥಾಪಕರಾಗಿರುವ ಎನ್ ಶಂಕರನಾರಾಯಣ ಭಟ್ ಇವರು "ಸಮರ್ಪಕ ಸಂಪನ್ಮೂಲಗಳ ಬಳಕೆಯ ಮೂಲಕ ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಬೇಕು" ಎಂದು ಕರೆ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯರಾಗಿರುವ ಇ.ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ನಡೆಯ ಬಗ್ಗೆ ಸಲಹೆ ಸೂಚನೆಗಳನ್ನು ಇತ್ತರು.
ಪ್ರವೇಶೋತ್ಸವ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಶಿಧರ ಕೆ ಸ್ವಾಗತಿಸಿ, ವಿಚೇತ ಎಲ್ ವಂದಿಸಿದರು.
Post a Comment