ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಬಸ್; ಐವರು ಸಾವು, 47 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಬಸ್; ಐವರು ಸಾವು, 47 ಮಂದಿಗೆ ಗಾಯ

 


ಇಂದೋರ್ (ಮಧ್ಯಪ್ರದೇಶ): ಪ್ರಯಾಣಿಕರಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, 47 ಮಂದಿ ಗಾಯಗೊಂಡಿರುವ ಘಟನೆಯೊಂದು ಇಂದೋರ್-ಖಾಂಡ್ವಾ ರಸ್ತೆಯಲ್ಲಿ ಗುರುವಾರ ನಡೆದಿದೆ.


ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹಾಗೂ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಓವರ್‌ಟೇಕ್ ಮಾಡುವಾಗ ಬಸ್ ಬ್ಯಾಲೆನ್ಸ್ ಕಳೆದುಕೊಂಡು ಕಮರಿಗೆ ಬಿದ್ದಿದೆ. ಇದರಿಂದಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಐವರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಬಸ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.

ಬಸ್‌ ಮಾಲೀಕ ಗುಲಾಬ್ ಸೋಂಕರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಏತನ್ಮಧ್ಯೆ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم