ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಿಯುಸಿ ಪರೀಕ್ಷೆ ಯಲ್ಲಿ ಫೇಲ್; ನೇಣುಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಪಿಯುಸಿ ಪರೀಕ್ಷೆ ಯಲ್ಲಿ ಫೇಲ್; ನೇಣುಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

 


ಮಂಡ್ಯ : ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದಿದೆ .


 ಸ್ಪಂದನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ .


ಮಂಡ್ಯದ ಸ್ಯಾಂತೋಂ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ಪ್ರಕಟವಾದ ಫಲಿತಾಂಶದಲ್ಲಿ ಸ್ಪಂದನಾ ಫಿಸಿಕ್ಸ್ , ಕೆಮಿಸ್ಟ್ರಿ , ಮ್ಯಾಥಮೆಟಿಕ್ಸ್ ವಿಷಯಗಳಲ್ಲಿ ಅನುತ್ತೀರ್ಣ ರಾಗಿದ್ದರು.


 ಸ್ಪಂದನಾ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ. ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ 

0 Comments

Post a Comment

Post a Comment (0)

Previous Post Next Post