ಮಂಗಳೂರು: ಬಂಟರ ಮಾತೃ ಬಂಟರ ಸಂಘದ ಮಾಜಿ ಕಾರ್ಯದರ್ಶಿ, ಲಯನ್ಸ್ ಕ್ಲಬ್ ನಾಯಕರು ಹಾಗೂ ತುಳುಕೂಟ ಕುಡ್ಲದ ಹಿರಿಯ ಸದಸ್ಯ ಲಯನ್ ನಿಟ್ಟೆ ಶಶಿಧರ ಶೆಟ್ಟಿ ವಿಧಿವಶರಾಗಿದ್ದಾರೆ.
ಅವರು ಶಾರದಾ ಕ್ಯಾಟರರ್ಸ್ ಸಂಸ್ಥೆಯ ಮಾಲೀಕರಾಗಿದ್ದರು. ಪದವಿನಂಗಡಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರು, ಅ.ಭಾ. ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ತುಳು ಅಕಾಡೆಮಿಯ ಸದಸ್ಯ- ಹೀಗೆ ಹತ್ತು ಹಲವು ಸಂಘಟನೆಗಳಲ್ಲಿ ಸಕ್ರಿಯರಾಗಿ ಬಹುಮುಖ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದರು.
ಅವರ ಪುತ್ರಿ ವಿದೇಶದಿಂದ ಆಗಮಿಸಬೇಕಾಗಿರುವುದರಿಂದ ಅಂತ್ಯಕ್ರಿಯೆ ಜೂನ್ 4ರಂದು ಜರಗಲಿದೆ.
ಅವರ ನಿಧನಕ್ಕೆ ಬಂಟರ ಮಾತೃಸಂಘದ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತುಳು ಅಕಾಡೆಮಿ ಸದಸ್ಯರಾದ ನಿಟ್ಟೆ ಶಶಿಧರ ಶೆಟ್ಟಿ ರವರ ನಿಧನಕ್ಕೆ ಸಂತಾಪ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ಅವರ ನಿಧನಕ್ಕೆ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‍ಸಾರ್, ಸದಸ್ಯರು ಹಾಗೂ ರಿಜಿಸ್ಟ್ರಾರ್ ಸಂತಾಪ ವ್ಯಕ್ತಪಡಿಸಿದರು.
2019ನೇ ಸಾಲಿನಲ್ಲಿ ದಯಾನಂದ ಜಿ. ಕತ್ತಲ್‍ಸಾರ್ ರವರ ಅಧ್ಯಕ್ಷತೆಯ ಸಮಿತಿಯಲ್ಲಿ ಅಕಾಡೆಮಿಯ ಸದಸ್ಯರಾಗಿದ್ದು ಅನೇಕ ರಚನಾತ್ಮಕ ಕಾರ್ಯ ಚಟುವಟಿಕೆಗಳ ಮೂಲಕ ತುಳುವಿಗೆ ಮಹತ್ವದ ಕೊಡುಗೆ ನೀಡಿರುವ ಇವರು ಅಖಿಲ ಭಾರತ ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ಬಂಟರ ಮಾತೃ ಸಂಘದ ಮಾಜಿ ಕಾರ್ಯದರ್ಶಿ, ಲಯನ್ಸ್ ನಾಯಕ, ತುಳುಕೂಟ ಕುಡ್ಲದ ಹಿರಿಯ ನಾಯಕ, ಶಾರದಾ ಕ್ಯಾಟರರ್ಸ್ ಸಂಸ್ಥೆಗಳ ಮಾಲಕ ಹಾಗೂ ಪದವಿನಂಗಡಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ನಿಟ್ಟೆ ಶಶಿಧರ ಶೆಟ್ಟಿ ರವರ ನಿಧನ ತುಳು ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ ಎಂದು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‍ಸಾರ್ ರವರು ಸಂತಾಪ ವ್ಯಕ್ತಪಡಿಸಿರುತ್ತಾರೆ.
Post a Comment