ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

 


ಉಡುಪಿ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆಯೊಂದು ಉಡುಪಿಯ ಕೊಡವೂರು ಸಮೀಪದ ಮೂಡುಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ನಡೆದಿದೆ.


ಅಡುಗೆ ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ.


ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ ಕೋಣೆಯ ಪಾತ್ರೆ, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕೋಣೆಗೆ ವ್ಯಾಪಿಸಿದೆ.


ಅವಘಡ ಸಂಭವಿಸುತ್ತಿದ್ದಂತೆ ಮನೆಯೊಳಗಿದ್ದವರು ಹೊರಗೆ ಓಡಿ ಬಂದು ಪಾರಾಗಿದ್ದಾರೆ. ಈ ವೇಳೆ ಸಾವಿತ್ರಿ ಹಾಗೂ ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

0 Comments

Post a Comment

Post a Comment (0)

Previous Post Next Post