ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುರಿಯ ಸ್ನಾನ ಮಾಡಿಸಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಕುರಿಯ ಸ್ನಾನ ಮಾಡಿಸಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

 


ತುಮಕೂರು: ಹೋಬಳಿಯ ತಿಂಗಳೂರು ಗ್ರಾಮದ ತಿಮ್ಮಯ್ಯ (62) ಎಂಬವರು ಕೆರೆಯಲ್ಲಿ ಕುರಿಯ ಮೈ ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆಯೊಂದು ಸೋಮವಾರ ಮಧ್ಯಾಹ್ನ ನಡೆದಿದೆ.


ತಕ್ಷಣ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ನೀರಿನಲ್ಲಿ ಶೋಧ ಕಾರ್ಯ ನಡೆಸಿದರೂ ಮೃತದೇಹ ಸಿಗಲಿಲ್ಲ.


ಕೊನೆಗೆ ಅಗ್ನಿಶಾಮಕ ಮತ್ತು ತುರ್ತುಸೇವಾ ಕಚೇರಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಶವವನ್ನು ಹೊರತೆಗೆದರು.

0 تعليقات

إرسال تعليق

Post a Comment (0)

أحدث أقدم