ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಅಪಘಾತ; ನಾಲ್ವರು ಸಾವು

ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಅಪಘಾತ; ನಾಲ್ವರು ಸಾವು

 




ಕಲಬುರಗಿ: ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್​ ದುರಂತ ಸಂಭವಿಸಿದ್ದು,  ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದರು.


ತೆಲಂಗಾಣದ ಹೈದರಬಾದ್‌ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸಕ್ಕೆ ತೆರಳಿದ್ದರು.

ಅಲ್ಲಿಂದ ಹಿಂತಿರುಗುವಾಗ ಅಪಘಾತ ಸಂಭವಿಸಿದೆ. ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.

ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವು ವರದಿಗಳ ಪ್ರಕಾರ ಬಸ್​ನಲ್ಲಿ 20ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದರು. ಗೋವಾದಿಂದ ಹೈದ್ರಾಬಾದ್​ಗೆ ಖಾಸಗಿ ಬಸ್ ತೆರಳುತ್ತಿತ್ತು ಎನ್ನಲಾಗಿದೆ.


22 ಜನರನ್ನು ಬಸ್‌ನಿಂದ ಹೊರ ಬಂದಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಟೆಂಪೊ ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ರಕ್ಷಣಾ ಪಡೆ ಬಂದಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್​ಗೆ ಹತ್ತಿದ್ದ ಬೆಂಕಿಯನ್ನು ನಂದಿಸಲಾಗಿದೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

0 تعليقات

إرسال تعليق

Post a Comment (0)

أحدث أقدم